March 11, 2026

Newsnap Kannada

The World at your finger tips!

education , learning , teaching

ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ : ಸಿಎಂ ಘೋಷಣೆ

Spread the love

ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ .

4 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಅಲ್ಲದೇ ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ಎಂದರು

ಯಾವ ಮಕ್ಕಳು ಆರ್ಥಿಕ ಸ್ಥಿತಿಯಿಂದ ವಿದ್ಯಾಬ್ಯಾಸ ಸ್ಥಗಿತಗೊಳಿಸಬಾರದು ಎಂಬ ಹಿತದೃಷ್ಠಿಯಿಂದ ಈ ವರ್ಷದ ಬಜೆಟ್‍ನಲ್ಲಿ ಪಿಯುಸಿಯಿಂದ ಪದವಿವರೆಗೆ ಉಚಿತ ಶಿಕ್ಷಣ, ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್‍ಪಾಸ್ ಸೌಲಭ್ಯ ಘೋಷಿಸಲಾಗಿದೆ.

ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿವಿಧ ನೀರಾವರಿ ಯೋಜನೆಗಳಿಗೆ 28 ಸಾವಿರ ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಭೂಮಿ ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ದರ ನಿಗದಿ ಮಾಡಿ ಐತಿರ್ಪು ಹೊರಡಿಸಲಾಗಿದೆ.

10 ಸಾವಿರ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷ ರೂ.ಗಳನ್ನು ನೀಡಿ 5 ಲಕ್ಷ ರೂ.ಗಳ ಯೋಜನೆ ರೂಪಿಸಿ ಉತ್ಪಾದನೆ ಮಾಡಿ ಮಾರುಕಟ್ಟೆ ಕಲ್ಪಿಸುವ ಮೂಲಕ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತಿದೆ. ಅದೇ ರೀತಿ ಯುವಕರಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2 ಯುವಕ ಸಂಘಕ್ಕೆ 5 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ.ಇದನ್ನು ಓದಿ –ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

error: Content is protected !!