December 23, 2024

Newsnap Kannada

The World at your finger tips!

ukren student

ಉಕ್ರೇನ್ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಶಿಕ್ಷಣ : ಸಚಿವ ಡಾ. ಸುಧಾಕರ್

Spread the love

ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ ಮಾಡಲಾಗುವುದು ಅಲ್ಲದೇ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ ಮಾಡಿರುವುದಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್
ಹೇಳಿದರು.

ಉಕ್ರೇನ್ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಉಕ್ರೇನ್‌ನಿಂದ ಕರ್ನಾಟಕಕ್ಕೆ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುರಕ್ಷಿತವಾಗಿ ಬಂದಿದ್ದಾರೆ. ಅವರ ಜೊತೆ ಸಭೆ ನಡೆಸುವಂತೆ ಸಿಎಂ ಹೇಳಿದ್ದರು. ಹೀಗಾಗಿ ಇಂದು ಸಭೆ ನಡೆಸಿದ್ದೇವೆ ಎಂದರು.

ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು ಎನ್ನುವ ಕಾರಣಕ್ಕಾಗಿ ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳು ಇವೆ. ತಕ್ಷಣಕ್ಕೆ ಅದೇ ಕಾಲೇಜುಗಳಲ್ಲಿ ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳು ಕಲಿಕೆ ಮುಂದುವರಿಸಬಹುದು. ವಿದ್ಯಾರ್ಥಿಗಳು ಇರುವ ಜಿಲ್ಲೆಗಳಲ್ಲೇ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು. 

ಈ ಕುರಿತಂತೆ ಚಚಿ೯ಸಲು ಸಮಿತಿಯೊಂದನ್ನು ರಚನೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ರಚನೆಯಾಗಿದೆ. ಉಕ್ರೇನ್‌ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸಮಿತಿ ವರದಿ ನೀಡಲಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಸಮಿತಿ ವರದಿ ಕೊಡಲಿದೆ. ಇದನ್ನು ನಾವು ಕೇಂದ್ರಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!