ಜೆಡಿಎಸ್ ನ ಪಂಚರತ್ನ ರಥಯಾತ್ರೆಯು ಮತ್ತೆ ಮುಂದುವರೆದಿದೆ. ಈ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಮೊಪೆಡ್ ದ್ವಿಚಕ್ರ ವಾಹನವನ್ನು ನೀಡುವುದಾಗಿ ಘೋಷಿಸಿದ್ದಾರೆ.
ಕೆಂಚೇನಹಳ್ಳಿಯ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕಲ್ ಮೊಪೆಡ್ ದ್ವಿಚಕ್ರ ವಾಹನ ನೀಡುವುದಾಗಿ ಹೇಳಿದರು.
4 ತಿಂಗಳಿನಿಂದ ಬಿಸಿಲಲ್ಲೇ ಇದ್ದೇನೆ.. ಏನೂ ಆಗಿಲ್ಲ:
ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ. ಎಲೆಕ್ಷನ್ ಕೆಲಸ ಇದ್ದಿದ್ದರಿಂದ ತಡವಾಗಿ ಆಗಮಿಸಿದೆ. ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಇದೇ ವೇಳೆ ಡ್ರೈವರ್ ನೆರಳಿಗೆ ಯಾತ್ರೆಯ ವಾಹನ ನಿಲ್ಲಿಸಲು ಮುಂದಾಗುತ್ತಿದ್ದರು. ಆಗ ಕುಮಾರಸ್ವಾಮಿ ಅವರು ವಾಹನ ನೆರಳಿಗೆ ಹಾಕಬೇಡಿ. ಕಾರ್ಯಕರ್ತರು ಬಿಸಿಲು ಜಾಸ್ತಿ ಇದೆ, ಅಣ್ಣ ಎಂದರು. ಇದಕ್ಕೆ 4 ತಿಂಗಳಿಂದ ಬಿಸಿಲಲ್ಲೇ ಇದ್ದೇನೆ. ಏನೂ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.ಇದನ್ನು ಓದಿ –ಇಂದು , ನಾಳೆ ಮೈಸೂರಿಗೆ ಪ್ರಧಾನಿ : ಕಾರ್ಯಕ್ರಮದ ವಿವರ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ