November 19, 2024

Newsnap Kannada

The World at your finger tips!

WhatsApp Image 2023 06 07 at 1.18.09 PM

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ

Spread the love

ಚಾಮರಾಜನಗರ :ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.

ಚಾಮರಾಜನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜಾರ್ಜ್, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುವ ತನಕ ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ಅಲ್ಲದೆ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು.

ನಮ್ಮ ಬಳಿ ವಿದ್ಯುತ್ ಇಲ್ಲದೇ ಇರುವಾಗ ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. ವಿದ್ಯುತ್ ಕಳ್ಳತನ ತಪ್ಪಿಸಲು ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇದರಿಂದ ರೈತರಿಗೆ ಅನುಕೂಲ. ಯಾರೋ ವಿದ್ಯುತ್ ಕಳ್ಳತನ ಮಾಡಿ ರೈತರ ಮೇಲೆ ಹಾಕುತ್ತಿದ್ದರು. ಆಧಾರ್ ಲಿಂಕ್‌ನಿಂದ ಅದೆಲ್ಲಾ ತಪ್ಪಲಿದೆ. ನಮ್ಮ ಇಲಾಖೆಗೂ ಲೆಕ್ಕ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ

ಪಂಪ್‌ಸೆಟ್ ಅಕ್ರಮ ಸಕ್ರಮದ ಅಡಿ 4 ಲಕ್ಷ ಅರ್ಜಿ ಬಾಕಿ ಇದ್ದವು. ಈಗ ಅದೆಲ್ಲಾ ಕಡಿಮೆಯಾಗಿದೆ. ವಿದ್ಯುತ್ ಲೈನ್‌ನಿಂದ 500 ಮೀಟರ್ ಒಳಗೆ ಇರುವ ಕೃಷಿ ಪಂಪ್‌ಸೆಟ್‌ಗಳ ಸಕ್ರಮಕ್ಕೆ ಕ್ರಮ ವಹಿಸಲಾಗುವುದು. 500 ಮೀಟರ್ ಆಚೆ ಇರುವ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್ ‘ಬಿ ಸೋಲಾರ್ ಯೋಜನೆ ಜಾರಿ ಮಾಡಲಾಗುವುದು ಎಂದರು.

Copyright © All rights reserved Newsnap | Newsever by AF themes.
error: Content is protected !!