ಜುಲೈನಿಂದ ಉಚಿತ ಕರೆಂಟ್’, ಆ.1 ಕ್ಕೆ `ಗೃಹಜ್ಯೋತಿ’ ಯೋಜನೆಗೆ ಜಾರಿ

Team Newsnap
1 Min Read

ಬೆಂಗಳೂರು : ರಾಜ್ಯದಲ್ಲಿ ಜುಲೈ ನಿಂದಲೇ ಉಚಿತ ವಿದ್ಯುತ್ ನೀಡುತ್ತೇವೆ. ಆಗಸ್ಟ್ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ಬರಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್ಅವರು, ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ.

ಜೂನ್ ತಿಂಗಳ ಮಾತ್ರ ಗ್ರಾಹಕರು ಕರೆಂಟ್ ಬಿಲ್ ಕಟ್ಟಬೇಕು. ಮನೆಯ ಅಗ್ರಿಮೆಂಟ್ ಪತ್ರ ಇದ್ದರೂ ಉಚಿತ ವಿದ್ಯುತ್ ನೀಡುತ್ತೇವೆ.ಆರ್ ಆರ್ ನಂಬರ್ ಇದ್ದೋರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.

ಬಾಡಿಗೆ ಮನೆಯಲ್ಲಿರುವವರು, ಹೊಸದಾಗಿ ಮನೆ ನಿರ್ಮಾಣ ಮಾಡಿದವರು, ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.ಮಗ ತೆರಿಗೆ ಕಟ್ಟಿದರೂ ಯಜಮಾನಿಯೇ ‘ಗೃಹಲಕ್ಷ್ಮಿ’ ಫಲಾನುಭವಿ

ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಎಲ್ಲಾ ಗೊಂದಲಗಳಿಗೂ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

Share This Article
Leave a comment