ರಾಜ್ಯದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿದ್ದು .ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾವಾಗಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸ್ ಅಥವಾ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ಬಸ್ ಗಳಲ್ಲಿ ಪ್ರಯಾಣ ಮಾಡಬಹುದು ಎಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಕರ್ನಾಟಕ ರಾಜ್ಯ ಸರ್ಕಾರ 2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಿಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಲಾಗುತ್ತದೆ .ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ವಿದ್ಯಾರ್ಥಿಗಳಿಗೆ ಶೈಕ್ಷಣಿಕೆ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಿಂದ ಸುತ್ತೋಲೆಯಲ್ಲಿ ತಿಳಿಸಿದ್ಧಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ