ಡಿಸ್ಚಾರ್ಜ್ ನಂತರವೂ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಸಿಎಂ ಬೊಮ್ಮಾಯಿ ಪ್ರಕಟ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲು‌ ಸರ್ಕಾರ ನಿರ್ಧರಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಈ ಘೋಷಣೆ ಮಾಡಿ‌ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯು ದುಬಾರಿಯಾಗಿದೆ. ಪ್ರತಿ ಇಂಜೆಕ್ಷನ್‍ಗೆ 10,000 ದಿಂದ 12,000 ರು ಆಗುತ್ತದೆ. ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ನಾಲ್ಕು ವಾರಗಳ ಕಾಲ ಇಂಜೆಕ್ಷನ್ ತೆಗೆದುಕೊಳ್ಳ ಬೇಕಾಗುತ್ತದೆ. ಆದರೆ ರೋಗಿಗಳ ಕುಟುಂಬದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಕೊಂಡು, ಬ್ಲ್ಯಾಕ್ ಫಂಗಸ್ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಎಲ್ಲಾ ಖರ್ಚನ್ನು ಸರ್ಕಾರವೇ ವಹಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇದೆ. ಕೊರೊನಾ ಮೂರನೇ ಅಲೆ ಕುರಿತಂತೆ ತಜ್ಞರ ಸಲಹೆ ಪಡೆಲಾಗಿದೆ.‌ ಮಕ್ಕಳ ಆರೋಗ್ಯಕ್ಕಾಗಿಯೇ ಶಿಬಿರಗಳನ್ನು ಸ್ಥಾಪಿಸಲಾಗುವುದು ಹಾಗೂ ಅಪೌಷ್ಟಿಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಆಹಾರ ಕಿಟ್‍ಗಳನ್ನು ಒದಗಿಸುತ್ತದೆ. ಅಲ್ಲದೇ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದರು.

ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಐಸಿಯು ಬೆಡ್‍ಗಳನ್ನು ಸಿದ್ಧಪಡಿಸಲು ನಿರ್ದೇಶಿಸಿದೆ. ಅಲ್ಲದೇ ವಿಜಯಪುರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 40 ವೆಂಟಿಲೇಟರ್‌ಗಳೊಂದಿಗೆ 120 ಬೆಡ್‍ಗಳ ನಿರ್ಮಿಸಿಲು ಸರ್ಕಾರ 22 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದರು.

Share This Article
Leave a comment