March 14, 2026

Newsnap Kannada

The World at your finger tips!

acb 1

ಕೋಲಾರದಲ್ಲಿ ಡಿಹೆಚ್ಓ ನಿವಾಸದ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ

Spread the love

ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ ಓ) ಡಾ.ವಿಜಯ್ ಕುಮಾರ್ ನಿವಾಸ, ಕಚೇರಿ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಧಾಳಿ ಮಾಡಿದ್ದಾರೆ.

ಮುಳಬಾಗಿಲಿನಲ್ಲಿರೋ ಮನೆ ಹಾಗೂ ಅವರ ಖಾಸಗಿ ಆಸ್ಪತ್ರೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

kolar b

ಚಿಂತಾಮಣಿಯಲ್ಲಿರುವ ಮನೆ ಹಾಗೂ ಬೆಂಗಳೂರಿನ ಫ್ಲಾಟ್ ಸೇರಿ ಒಟ್ಟು ಆರು ಕಡೆ ಏಕ ಕಾಲದಲ್ಲಿ ದಾಳಿ ನಡೆದಿದೆ.

ಎಸಿಬಿ ಡಿವೈಎಸ್​ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.  ಡಾ.ವಿಜಯ್ ಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಹಿನ್ನೆಲೆ ಎಸಿಬಿ ದಾಳಿ ಮಾಡಿ ಸಂಪತ್ತಿನ ಶೋಧ ನಡೆದಿದೆ.

error: Content is protected !!