ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ಪಾಪಿ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಈ ಘಟನೆಯು ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ಜರುಗಿದೆ
ದೀಪಕ್ ಕುಮಾರ್ ಸಿಂಗ್(46) ಮೃತ ತಂದೆ. ತಡರಾತ್ರಿ 1.30ರ ಸುಮಾರಿಗೆ ದೀಪಕ್ ಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಈತ ಮೂಲತಃ ಬಿಹಾರದವನು. ಜಿಕೆವಿಕೆನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು.
ಇಬ್ಬರು ಹೆಣ್ಣು ಮಕ್ಕಳ ಜೊತೆ ವಾಸವಿದ್ದ ದೀಪಕ್, ಕಳೆದ 1 ವರ್ಷದಿಂದ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಮಾಡುತ್ತಿದ್ದನು. ತಂದೆಯ ಕಿರುಕುಳದ ಬಗ್ಗೆ ತಾಯಿಯ ಬಳಿ ಮಕ್ಕಳು ಹೇಳಿಕೊಂಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಓರ್ವ ಮಗಳು ಸ್ನೇಹಿತರ ಬಳಿ ಹೇಳಿಕೊಂಡಿದ್ದಳು.
ಇದರಿಂದ ಆಕ್ರೋಶಗೊಂಡ ಯುವತಿಯ ಸ್ನೇಹಿತರು ತಡರಾತ್ರಿ ಮನೆಗೆ ನುಗ್ಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಪತ್ತೆಗೆ ಕ್ರಮ ಜರುಗಿಸಲಾಗಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ