ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲಲ್ಲಿ ಶಿಕ್ಷಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಶಿಕ್ಷಕ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡವರು.
ಮೈಸೂರು ಜಿಲ್ಲೆಯ ಕೆ.ಆರ್ ನಗರದ ಕೋಗಿಲೂರು ಗ್ರಾಮದ ನಿವಾಸಿ.
ಕೊರೊನಾ ಪಾಸಿಟಿವ್ ದೃಢವಾಗುತ್ತಿದ್ದಂತೆಯೇ ಮೃತ ಲೋಕೇಶ್ ಗೆ ಕುಟುಂಬಸ್ಥರು ಆತ್ಮಸ್ಥೈರ್ಯ ತುಂಬಿದ್ದರು. ಅಲ್ಲದೆ ವಾರ್ ರೂಂನಿಂದ ಕರೆ ಮಾಡಿ ಆತಂಕ ಪಡೆದಂತೆ ತಿಳಿಸಿದ್ದರು. ಆದರೂ ಭಯದಿಂದ ಮನೆ ಬಿಟ್ಟು ಹೋಗಿ ಲೋಕೇಶ್ ಸಾವಿಗೆ ಶರಣಾಗಿದ್ದಾರೆ.
ಲೋಕೇಶ್ ಗೆ ಕಳೆದ ವರ್ಷವಷ್ಟೇ ಮದುವೆಯಾಗಿತ್ತು. ತನ್ನ ಪತ್ನಿ ಮನೆಗೆ ಹೋಗುವುದಾಗಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ಅಲ್ಲಿಯೇ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದರು.
ಎರಡು ದಿನದ ಬಳಿಕ ಹಾಸನ ಜಿಲ್ಲೆಯ ಅರಕಲಗೂಡಿನ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ