ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ – 2005 ರ ವ್ಯಾಪ್ತಿಗೆ ಒಳಪಡುತ್ತದೆ. ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗವು ಸ್ಪಷ್ಟಪಡಿಸಿದೆ.
ನಗರದ ಸೇಂಟ್ ಜೋಸೆಫ್ ಸಂಜೆ ಕಾಲೇಜು ಸೇಂಟ್ ಜೋಸೆಫ್ ಕಲಾ ಮತ್ತು ವಿಜ್ಞಾನ ಕಾಲೇಜು ಮತ್ತು ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜುಗಳು ಸರ್ಕಾರದ ಅನುದಾನ ಪಡೆಯುತ್ತಿವೆ. ಸರ್ಕಾರದ ಅನುದಾನವು ಸಾರ್ವಜನಿಕರ ತೆರಿಗೆ ಹಣವಾಗಿರುವ ಹಿನ್ನೆಲೆಯುಲ್ಲಿ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಕರ್ನಾಟಕ ಮಾಹಿತಿ ಆಯೋಗ ಪುನರುಚ್ಛರಿಸಿದೆ.
ಮಾಹಿತಿ ಹಕ್ಕು ಅಧಿನಿಯಮ-2005 ರ ಅಡಿಯಲ್ಲಿ ಮಾಹಿತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಈ ಕಾಲೇಜುಗಳು ತಿರಸ್ಕರಿಸಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸುಧಾ ಕಟ್ವಾ ಎಂಬುವವರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ ಆಯೋಗವು ಸ್ಪಷ್ಟನೆ ನೀಡಿದೆಯಲ್ಲದೆ, ಅರ್ಜಿದಾರರು ಕೋರಿರುವ ಮಾಹಿತಿಯನ್ನು 30 ದಿನಗಳೊಳಗೆ ನೀಡುವಂತೆ ಈ ಮೂರೂ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.
ಅಲ್ಲದೆ, ಮಾಹಿತಿ ನೀಡಲು ನಿರಾಕರಿಸಿದ ಈ ಮೂರು ಕಾಲೇಜುಗಳಿಗೆ ತಲಾ 25,000 ರೂ. ದಂಡವನ್ನು ಏಕೆ ವಿಧಿಸಬಾರದು ? ಎಂದು ಪ್ರಶ್ನಿಸಿದೆ. ಅಂತೆಯೇ, ಮುಂದಿನ ಜನವರಿ 13 ರ ವಿಚಾರಣೆ ವೇಳೆ ಹಾಜರಿರಲು ಆದೇಶಿಸಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್ ಪಿ ರಮೇಶ್ ತಿಳಿಸಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment