ಕೆ ಆರ್ ಎಸ್ ಆಣೆಕಟ್ಟೆಯಿಂದ ತ. ನಾಡಿಗೆ ಹರಿಯುತ್ತಿದ್ದ ನೀರು ಸ್ಥಗಿತ : ಪ್ರತಿಭಟನೆ ಹಿಂದಕ್ಕೆ

Team Newsnap
1 Min Read

ಮಂಡ್ಯ : ಕೆ ಅರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕಳೆದ 9 ! ದಿನಗಳಿಂದ ಮಂಡ್ಯದ ಸರ್. ಎಂ ವಿ ಪ್ರತಿಮೆ ಎದುರು ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿತು.

ಇದನ್ನು ಓದಿ – ರಾಜ್ಯದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್ – BSY

ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತಾ ಬಂದಿದ್ದೆವು ,ಇದೀಗ ರಾಜ್ಯ ಸರ್ಕಾರ ನೆರೆರಾಜಕ್ಕೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವುದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ ಎಂದು ಸಮಿತಿಯ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸಮ್ಮುಖದಲ್ಲಿ ತಿಳಿಸಿದರು.

Share This Article
Leave a comment