ಇಂದಿನಿಂದ ರಾಜ್ಯದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ಜಾರಿಯಾಗಿದೆ.
ಈ ಕುರಿತಂತೆ ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ್ ಆದೇಶ ಹೊರಡಿಸಿದ್ದಾರೆ.
ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡ ಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬಹುದು.
ಈ ಕುರಿತಂತೆ ಮಾಹಿತಿ ಇಲ್ಲಿದೆ:
1) ರೈತರು ಕೃಷಿ ಉದ್ದೇಶಕ್ಕೆ ಸ್ಥಳೀಯವಾಗಿ 15 ಕಿಲೋಮೀಟರ್ ದೂರದವರೆಗೆ ಪರವಾನಗಿ ಇಲ್ಲದೆ ಎರಡು ಹಸು ಮತ್ತು ಎರಡು ಕರುಗಳನ್ನು ಮಾತ್ರ ಕೊಂಡೊಯ್ಯಬಹುದು. ರಾತ್ರಿ ವೇಳೆ ಗೋವುಗಳ ಸಾಗಣೆ ಸಂಪೂರ್ಣ ನಿಷೇಧ.
2) ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಗೋವುಗಳ ಸಾಗಣೆಗೆ ಅವಕಾಶವಿಲ್ಲ. ಬೇಸಿಗೆಯ ಕಾಲದಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ಅವಧಿಯಲ್ಲೂ ಗೋವುಗಳ ಸಾಗಣೆಗೆ ನಿಷೇಧ.
3) ಕೃಷಿ ಅಥವಾ ಪಶುಸಂಗೋಪನೆಯ ಉದ್ದೇಶಕ್ಕೆ ಹಸು, ಕರು, ಎತ್ತು, ಎಮ್ಮೆ, ಕೋಣಗಳನ್ನು ಸಾಗಿಸುವಾಗಲೂ ಸಾಗಣೆಯ ಪರವಾನಗಿ ಹೊಂದಿರಬೇಕಾದುದು ಕಡ್ಡಾಯ. ಅದರೊಂದಿಗೆ ಮಾಲೀಕತ್ವದ ದಾಖಲೆ ಮತ್ತು ಪಶುವೈದ್ಯಕೀಯ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನೂ ಹೊಂದಿರಬೇಕು.
4) ವಾಹನದಲ್ಲಿರುವ ಗೋವುಗಳ ಸಂಖ್ಯೆ, ಕಳುಹಿಸಿದವರು ಮತ್ತು ಪಡೆಯುವವರ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ದೊಡ್ಡ ಅಕ್ಷರಗಳಲ್ಲಿ ವಾಹನದ ಮೇಲೆ ಬರೆಯುವುದು ಕಡ್ಡಾಯ.
5) ಜಾನುವಾರುಗಳ ಮಾಲೀಕರು ಮಾಲೀಕತ್ವದ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ ಸಾಗಣೆ ಪರವಾನಗಿ ಪಡೆಯುವುದು ಕಡ್ಡಾಯ. ಪರವಾನಗಿಯ ಹೊರತಾಗಿ ಗೋಸಾಗಣೆಗೆ ವಾಹನಗಳ ಮಾಲೀಕರು ಸಮ್ಮತಿ ಸೂಚಿಸುವಂತಿಲ್ಲ.
6) ಜಾನುವಾರುಗಳನ್ನು ಎಂಜಿನ್ ಕಡೆ ಮುಖ ಮಾಡಿಯೇ ಕಟ್ಟಿರಬೇಕು. ಮೇವು ಮತ್ತು ನೀರು ಪೂರೈಸಿದ ಬಳಿಕವೇ ವಾಹನ ಹತ್ತಿಸಬೇಕು. ಆರು ತಿಂಗಳಿಗಿಂತಲೂ ಹೆಚ್ಚಿನ ಅವಧಿಯ ಗಬ್ಬದ ಹಸು ಅಥವಾ ಎಮ್ಮೆಗಳನ್ನು ಸಾಗಿಸುವಂತಿಲ್ಲ ಎಂಬ ನಿರ್ಬಂಧಗಳನ್ನು ವಿಧಿಸಲಾಗಿದೆ.
7) 25 ಕಿ.ಮೀ. ವೇಗಮಿತಿ: ಗೋವುಗಳನ್ನು ಸಾಗಿಸುವ ವಾಹನವನ್ನು ಪ್ರತಿ ಗಂಟೆಗೆ 25 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ಓಡಿಸುವಂತಿಲ್ಲ.
8) ಸಾಗಣೆಯ ಸಮಯದಲ್ಲಿ ಗೋವುಗಳ ಸಾವು ಸಂಭವಿಸಿದರೆ ಮರಣೋತ್ತರ ಪರೀಕ್ಷೆ ನಡೆಸಿ, ವರದಿ ಪಡೆದ ಬಳಿಕವೇ ಮೃತದೇಹವನ್ನು ಸಾಗಿಸಬಹುದು.
9) ವಾಹನದೊಳಗೆ ಗೋವುಗಳು ಪ್ರತ್ಯೇಕವಾಗಿ ಇರುವುದಕ್ಕೆ ಪೂರಕವಾಗಿ ವಿಭಜನಾ ವ್ಯವಸ್ಥೆ ಮಾಡಿರಬೇಕು.
100 ಕೆ.ಜಿ.ಗಿಂತ ಕಡಿಮೆ ತೂಕ ಹೊಂದಿದ್ದಲ್ಲಿ 1.5 ಚದರ ಮೀಟರ್ ಮತ್ತು 100 ಕೆ.ಜಿ.ಗಿಂತ ಹೆಚ್ಚು ತೂಕವಿದ್ದಲ್ಲಿ 2 ಚದರ ಮೀಟರ್ ಸ್ಥಳಾವಕಾಶ ಕಲ್ಪಿಸಬೇಕು.
10)ನಿಯಮಗಳ ಉಲ್ಲಂಘನೆಯಾದಲ್ಲಿ ಗೋವುಗಳ ಮಾಲೀಕರು ಅಥವಾ ಅವರ ಪ್ರತಿನಿಧಿ, ವಾಹನ ಮಾಲೀಕರು, ಜತೆಗಿರುವ ಸಿಬ್ಬಂದಿ ಕೂಡ ಹೊಣೆಗಾರರಾಗುತ್ತಾರೆ.
11) ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು.
12 ) ಸಾರ್ವಜನಿಕರು ಗಮನಕ್ಕೆ ತಂದರೂ ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ