January 30, 2026

Newsnap Kannada

The World at your finger tips!

male

ಅ. 24ರಿಂದ ನಾಲ್ಕು ದಿನ ಮಲೆ ಮಹದೇಶ್ವರನ ದರ್ಶನವಿಲ್ಲ

Spread the love

ದಸರಾ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರನ ದರ್ಶನ ಸಿಗುವುದಿಲ್ಲ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ನಾಲ್ಕು ದಿನಗಳ ಕಾಲ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ. ಆರ್. ರವಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 24 ರಿಂದ 4 ದಿನಗಳ ಕಾಲ ಭಕ್ತರು ದೇವಾಲಯಕ್ಕೆ ಭೇಟಿ ನೀಡುವಂತಿಲ್ಲ.

ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಇದರಿಂದಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ, ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕೋವಿಡ್ ಮಾರ್ಗಸೂಚಿ ಅನ್ವಯ ಹೆಚ್ಚು ಜನರು ಒಂದು ಕಡೆ ಸೇರುವಂತಿಲ್ಲ. ಸಾವಿರಾರು ಭಕ್ತರು ಆಗಮಿಸಿದರೆ ದೇವಾಲಯದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟವಾಗಲಿದೆ. ಆದ್ದರಿಂದ ಜಿಲ್ಲಾಡಳಿತ ಈ ತೀರ್ಮಾನ ಕೈಗೊಂಡಿದೆ.

error: Content is protected !!