ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಆರ್ಟಿಕಲ್ಚರ್ ಮತ್ತು ಸಿರಿಕಲ್ಚರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ರಾಜೇಂದ್ರ ಕುಮಾರ್ ಕಠಾರಿಯ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
2000 ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಎಂಸ್‌ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ.
ಕೆಪಿಟಿಸಿಎಲ್ ಎಂಡಿ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.
ಕೃಷಿ ಇಲಾಖೆಯ ಕಮೀಷನರ್ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ. ಮೋಹನ್ ರಾಜ್ ಕೆ.ಪಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು