ಮಡಿವಾಳ ಬಳಿ ಅಪಾರ್ಟ್ಮೆಂಟ್ವೊಂದರಲ್ಲಿ ಈ ಪ್ರಕರಣ ನಡೆದಿದೆ, ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.ಇದನ್ನು ಓದಿ –ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಅಧಿಕಾರಿಗಳಿಗೆ ಡಿಸಿ ಅಶ್ವತಿ ಸೂಚನೆ
ಎಫ್ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ, ತಡವಾಗಿ ಬೆಳಕಿಗೆ ಬಂದಿದೆ.
ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್ನೋಟ್ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ.
ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು