ಸಾಲ ಮರು ಪಾವತಿ ಮಾಡಿದರೆ ಪೂರ್ಣ ಬಡ್ಡಿ ಮನ್ನಾ – ಸಿಎಂ ಘೋಷಣೆ

Team Newsnap
1 Min Read

ಬೆಳಗಾವಿ : ರಾಜ್ಯದ ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ಘೋಷಣೆ ಮಾಡಿದರು .

ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಅಂತ್ಯ ಕೊಂಡ ಚಳಿಗಾಲ ಅಧಿವೇಶನದಲ್ಲಿ ಈ ಘೋಷಣೆ ಮಾಡಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದರು .

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು.ಅದರಲ್ಲಿ ಬಡ್ಡಿ ಮನ್ನಾ ಸಹ ಒಂದು.

ಇದನ್ನು ಓದಿ – IPL 2024 : ‘ ಹಾರ್ದಿಕ್ ಪಾಂಡ್ಯ ‘ ಮುಂಬೈ ಇಂಡಿಯನ್ಸ್ ನಾಯಕನಾಗಿ ಆಯ್ಕೆ

ಅಧಿವೇಶನದ ಕೊನೆ ದಿನವಾದ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ವಿವರ ಇಂತಿದೆ

  • 1) ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.
  • 2) ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • 3) ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು
  • 4) ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • 5) ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
    ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • 6) ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • 7) ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.ಇವುಗಳಲ್ಲಿ ಬಡ್ಡಿ ಮನ್ನಾ ಪ್ರಮುಖವಾಗಿದೆ.

Share This Article
Leave a comment