ನ್ಯೂಸ್ ಸ್ನ್ಯಾಪ್.
ಮಂಡ್ಯ.
ಜಿಲ್ಲೆಯ ಮಳವಳ್ಳಿ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ದಂಪತಿಗಳು ಸಾವನ್ನಪ್ಪಿದ್ದಾರೆ.
ಚನ್ನಪಟ್ಟಣದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮಧುಸೂದನ್ ಜೋಷಿ ಹಾಗೂ ಗಂಗಾ ಜೋಷಿ ಈ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಗಳು ಅನುಷಾ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಚನ್ನಪಟ್ಟಣದಿಂದ ಇಂದು ಬೆಳಿಗ್ಗೆ ಮಳವಳ್ಳಿ ಸಮೀಪದ ಗಗನಚುಕ್ಕಿ ಜಲಪಾತ ನೋಡಲು ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ 206ರ ರಾಷ್ಟ್ರೀಯ ಹೆದ್ದಾರಿಯ ದಾಸನದೊಡ್ಡಿ ಗ್ರಾಮ ಬಳಿ ಜೋಷಿ ಓಡಿಸುತ್ತಿದ್ದ ಕಾರು ಹಾಗೂ ಮತ್ತೊಂದು ಕಾರು, ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಗಾಯಗೊಂಡ ಗಂಗಾ ಜೋಷಿ, ಮಧೂಸೂದನ್ ಜೋಷಿ ಅವರನ್ನು ಚಿಕಿತ್ಸೆಗಾಗಿ ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಳವಳ್ಳಿ
ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ