ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿಯ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ದೇಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಅನೇಕ ನಾಯಕರು ಮಹಾತ್ಮ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಇದನ್ನು ಓದಿ – ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದ ಯುವಕ
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, “ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ” ಎಂದು ತಿಳಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು