ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗಣೇಶೋತ್ಸವ ಸಂಭ್ರಮ ಜರುಗಿತು.
ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಠಾಪಿಸಿ ಆದಿಪೂಜಿತನನ್ನು ಪೂಜಿಸಿ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ತಾಲ್ಲೂಕು ದಂಡಾಧಿಕಾರಿ ತಹಶೀಲ್ದಾರ್ ಎಂ.ಶಿವಮೂರ್ತಿ ಮತ್ತು ಸಿಬ್ಬಂಧಿಗಳು.
ಕಾರ್ಯಕ್ರಮದಲ್ಲಿ ವೇದಬ್ರಹ್ಮ ನಾರಾಯಣಾಚಾರ್ಯ ಮತ್ತು ಮೋಹನಆಚಾರ್ಯರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮಗಳು..
ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ನಾಡಿನಾದ್ಯಂತ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಗಣೇಶೋತ್ಸವ ಆಚರಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸದೇ ಸರಳವಾಗಿ ಪೂಜೆ ಪುರಸ್ಕಾರಗಳನ್ನು ನಡೆಸಿ ಐದು ದಿನಗಳ ಒಳಗೆ ಗಣಪತಿಯನ್ನು ನಿಗಧಿತ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು..
ಗಣೇಶೋತ್ಸವ ಪೂಜಾ ಕಾರ್ಯಕ್ರಮದಲ್ಲಿ ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ ಪ್ರಕಾಶ್, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಉಪತಹಶೀಲ್ದಾರ್ ಗಳಾದ ಲಕ್ಷ್ಮೀಕಾಂತ್, ಚಿಕ್ಕಲಕ್ಷ್ಮೀ, ಹಿರಿಯಣ್ಣ, ರಾಮಚಂದ್ರಪ್ಪ, ವಿವಿಧ ವೃತ್ತಗಳ ಗ್ರಾಮಲೆಕ್ಕಾಧಿಕಾರಿಗಳು, ರಾಜಶ್ವನಿರೀಕ್ಷಕರು ಹಾಗೂ ತಾಲ್ಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ