January 28, 2026

Newsnap Kannada

The World at your finger tips!

rape

ಮದ್ಯದಲ್ಲಿ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ

Spread the love

ಉಡುಪಿ: ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 21 ವರ್ಷದ ಯುವತಿಗೆ ಮದ್ಯದಲ್ಲಿ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ( gang Rape ) ನಡೆಸಿದ ಘಟನೆ ಹೊರಬಂದಿದೆ.

ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದು ,ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು.

ಆರೋಪಿ ಅಲ್ತಾಫ್ ಶುಕ್ರವಾರ ಸಂತ್ರಸ್ತೆಗೆ ಕರೆ ಮಾಡಿ ಬರಲು ಹೇಳಿ , ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ.

ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದು,ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ.

ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸವೇರಾ ರಿಚರ್ಡ್‌ ಕ್ವಾಡ್ರಸ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದ್ದು ,ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

error: Content is protected !!