ಬೆಂಗಳೂರಿನಲ್ಲಿ ಕಾಮುಕರ ಗ್ಯಾಂಗ್ ವೊಂದು ಪಶ್ಚಿಮ ಬಂಗಾಳದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಾರ್ಚ್ 24 ರಂದು ನಡೆದ ಈ ಘಟನೆಯ ಬಗ್ಗೆ ಸಂತ್ರಸ್ತ ಯುವತಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ದೆಹಲಿ ಮೂಲದ ರಜತ್, ಶಿವರಾಣ್, ದೇವ್ ಸರೋಯಿ ಹಾಗೂ ಯೋಗೇಶ್ ಕುಮಾರ್ ಬಂಧಿತ ಆರೋಪಿಗಳು.
ಬೆಂಗಳೂರಿನಲ್ಲಿ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದರು. ಡೇಟಿಂಗ್ ಆ್ಯಪ್‌ನಲ್ಲಿ ಯುವತಿಗೆ ಆರೋಪಿ ರಜತ್ ಪರಿಚಯವಾಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿ ಇಬ್ಬರು ನಂಬರ್‌ಗಳನ್ನು ಶೇರ್ ಮಾಡಿಕೊಂಡು ಸಂಪರ್ಕದಲ್ಲಿದ್ದರು.
ಕಳೆದ ವಾರ ರಜತ್ ಯುವತಿಗೆ ಊಟಕ್ಕೆಂದು ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿದ್ದ. ಬಳಿಕ ಹತ್ತಿರದಲ್ಲಿದ್ದ ತನ್ನ ರೂಂ ಗೂ ಕರೆದುಕೊಂಡು ಹೋಗಿದ್ದಾನೆ. ರೂಂನಲ್ಲಿ ರಜತ್ ಸ್ನೇಹಿತರು ಸೇರಿ ಎಲ್ಲರು ಕುಡಿದು ಊಟ ಮಾಡಿದ್ದರು. ಕುಡಿದ ಅಮಲಿನಲ್ಲಿ ಅತ್ಯಾಚಾರ ಎಸಗಿದ್ದಾರೆ.
ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿಗಳು ದೆಹಲಿಗೆ ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಕಾರ್ಯಪ್ರವೃತ್ತರಾಗಿ ಬೆಂಗಳೂರಿನ ಉಪ್ಪಾರ್ ಪೇಟೆ ಲಾಡ್ಜ್ ಹಾಗೂ ಏರ್ಪೋರ್ಟ್ ನಲ್ಲಿ ಅಡಗಿದ್ದವರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ