ಮಂಡ್ಯ: ಮಂಡ್ಯದ ಜಿಲ್ಲಾ ಭೂ ದಾಖಲೆ ನೌಕರರ ಸಂಘದ ಆವರಣದಲ್ಲಿ ಗಾಂಜಾ ಗಿಡಗಳು ಪತ್ತೆಯಾದ ಘಟನೆ ನಡೆದಿದೆ.
ಖಚಿತ ಮಾಹಿತಿಯ ಮೇಲೆ ನ್ಯಾಯಾಲಯದ ವಾರೆಂಟ್ ಪಡೆದು ಅಬಕಾರಿ ನಿರೀಕ್ಷಕಿ ವನಿತಾ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಸುಮಾರು 3 ಮೀಟರ್ ಎತ್ತರದ ಎರಡು ಗಾಂಜಾ ಗಿಡಗಳು ಪತ್ತೆಯಾಗಿದ್ದು, ಈ ಗಿಡಗಳ ಬೆಲೆ ಸುಮಾರು 50 ಸಾವಿರ ರೂಪಾಯಿಗಳಷ್ಟು ಅಂದಾಜಿಸಲಾಗಿದೆ.
ಇದನ್ನು ಓದಿ – 370ನೇ ವಿಧಿಯ ಮರು ಜಾರಿಗೆ ಒತ್ತಾಯ – ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ, ಸದಸ್ಯರ ನಡುವೆ ತೀವ್ರ ವಾಕ್ಸಮರ
ಯಾರೋ ವ್ಯಕ್ತಿಯು ಗಾಂಜಾ ಸೇವಿಸಿ ಬೀಜ ಬಿಸಾಡಿದ ಪರಿಣಾಮ ಈ ಗಿಡಗಳು ಬೆಳೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡು, ಗಾಂಜಾ ಬೆಳೆದವರ ಪತ್ತೆಗೆ ಮುಂದಾಗಿದ್ದು, ಮಂಡ್ಯ ಅಬಕಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತನಿಖೆ ಮುಂದುವರಿಯುತ್ತಿದೆ.
More Stories
ಮಂಗಳೂರಿನಲ್ಲಿ ಬಾಲಕಿಗೆ ಸಾಮೂಹಿಕ ಅತ್ಯಾಚಾರ – ಮೂವರಿಗೆ ಜೀವಾವಧಿ ಶಿಕ್ಷೆ
ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ