ಗಾಂಜಾ‌ ದಂಧೆ -ಮಂಗಳೂರಿನ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿ 10 ಮಂದಿ ಬಂಧನ

Team Newsnap
1 Min Read
Drug trafficking case – 42 students of Manipal University suspended ಡ್ರಗ್ಸ್ ದಂಧೆ ಕೇಸ್ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಅಮಾನತು

ಮಂಗಳೂರಿನ ಕಾಲೇಜಿನ ವೈದ್ಯರು‌ ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು ಭಾಗಿಯಾಗಿದ್ದ ಭಾರೀ ಹೈಪ್ರೊಫೈಲ್ ಗಾಂಜಾ ಮಾರಾಟ ದಂಧೆಯನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದಾರೆ.ಗೃಹ ಸಚಿವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

ಗಾಂಜಾ ಸೇವನೆ ಹಾಗೂ ಗಾಂಜಾ ಪೆಡ್ಲಿಂಗ್ ಪ್ರಕರಣದಲ್ಲಿ ಇಬ್ಬರು ವೈದ್ಯರು ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನ ಭಾಗಿಯಾಗಿದ್ದಾರೆ‌.

ವೈದ್ಯರಾದ ಡಾ. ಸಮೀರ್(32), ಮಣಿ‌ಮಾರನ್ ಮುತ್ತು(28)ರನ್ನು ವಶಕ್ಕೆ ಪಡೆಯಲಾಗಿದ್ದು, ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರವೂಫ್‌ ಅಲಿಯಾಸ್ ಗೌಸ್ (34)ನನ್ನು ಬಂಧಿಸಲಾಗಿದೆ.

ಆರೋಪಿಗಳ ಬಳಿ ಇದ್ದ 2 ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದೆ.

Share This Article
Leave a comment