ಮಂಗಳೂರಿನ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು – ಹಲವರು ಅಸ್ವಸ್ಥ

Team Newsnap
1 Min Read

ಮಂಗಳೂರಿನ ಹೊರ ವಲಯದ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ

ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ

ಈಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. 

ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ. 

ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share This Article
Leave a comment