ಭಾರತದ ಉದ್ಯಮಿ ಗೌತಮ್ ಅದಾನಿ ವಿಶ್ವದ ಖ್ಯಾತ ಉದ್ಯಮಿ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
ಫೋರ್ಬ್ಸ್ ರಿಲೀಸ್ ಮಾಡಿದ ಶ್ರೀಮಂತರ ಪಟ್ಟಿಯಲ್ಲಿ ಬಿಲ್ ಗೇಟ್ಸ್ ಐದನೇ ಸ್ಥಾನ ಪಡೆದಿದ್ದರೆ, ಅವರನ್ನು ಹಿಂದಿಕ್ಕಿ ಗೌತಮ್ ಅದಾನಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದ್ದಾರೆ.ಇದನ್ನು ಓದಿ –ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವಾ ಕಣಕ್ಕೆ
ಅದಾನಿ ಗ್ರೂಪ್ಸ್‌ನ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅದಾನಿಯವರ ನಿವ್ವಳ ಮೌಲ್ಯ 113 ಬಿಲಿಯನ್ ಡಾಲರ್ ತಲುಪಿದೆ, ಆದರೆ ಗೇಟ್ಸ್ ಪ್ರಸ್ತುತ 102 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.
ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಆಸ್ತಿಯಲ್ಲಿ ಸುಮಾರು 23 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಳವಾಗಿದೆ . ಹೆಚ್ಚುತ್ತಿರುವ ಸಂಪತ್ತಿನ ವಿಷಯದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. 2022 ರಲ್ಲಿ ಅವರ ಸಂಪತ್ತು ಸುಮಾರು 23 ಶತಕೋಟಿ ಡಾಲರ್ ಗಳಷ್ಟು ಹೆಚ್ಚಾಗಿದೆ.
2021 ಮತ್ತು 2020ರಲ್ಲಿ ಅದಾನಿ ಸಂಪತ್ತು 40-40 ಬಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಅದಾನಿ ಸಂಪತ್ತಿನ ಹೆಚ್ಚಳಕ್ಕೆ ದೊಡ್ಡ ಕಾರಣವೆಂದರೆ ಅದಾನಿ ಸಮೂಹದ ಷೇರುಗಳಲ್ಲಿ ಸ್ಥಿರವಾದ ಏರಿಕೆಯಾಗಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ