ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ. ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ.ಬೆಳಿಗ್ಗೆ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ಜೈಲಿನಲ್ಲಿರುವ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಮುರುಘಾ ಮಠ ಸರ್ಕಾರ ಅಧೀನಕ್ಕೆ
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು