ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡರ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ. ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ.ಬೆಳಿಗ್ಗೆ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ಜೈಲಿನಲ್ಲಿರುವ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಮುರುಘಾ ಮಠ ಸರ್ಕಾರ ಅಧೀನಕ್ಕೆ
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
- ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
- ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
- ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್
- ಕೇಂದ್ರದಲ್ಲಿನ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಖಾಲಿ ಹುದ್ದೆಗಳು
More Stories
ಮತ್ತೆ ಟೋಲ್ ಶುಲ್ಕ ಹೆಚ್ಚಳ, ಏಪ್ರಿಲ್ 1 ರಿಂದಲೇ ಹೊಸ ದರ
ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಚುನಾವಣೆಯಿಂದ 6 ವರ್ಷ ಅನರ್ಹ
ಸಂಸತ್ ಸದಸ್ಯತ್ವಕ್ಕೆ ಪ್ರಜ್ವಲ್ ರೇವಣ್ಣರಾಜೀನಾಮೆ ? ದೇವೇಗೌಡರಿಗೆ ತಲೆ ನೋವಾದ ಹಾಸನ ಟಿಕೆಟ್