Trending

ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ: ಸಚಿವರಿಂದ ಸ್ವಾಗತ

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಯು ಗುರುವಾರ ತುಲಾಲಗ್ನದಲ್ಲಿ ಮೈಸೂರು ಅರಮನೆ ಆವರಣವನ್ನು ಪ್ರವೇಶಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸಾಂಪ್ರದಾಯಕವಾಗಿ ಸ್ವಾಗತಿಸಿದರು.


ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ 8.36 ರಿಂದ 9.11 ರ ಶುಭಲಗ್ನದಲ್ಲಿ ಮಂಗಳವಾದ್ಯ, ಪೂರ್ಣಕುಂಭದೊಂದಿಗೆ ಗಜಪಡೆಯನ್ನು ಅರಮನೆಯ ಆವರಣದೊಳಕ್ಕೆ ಬರಮಾಡಿಕೊಳ್ಳಲಾಯಿತು.

ಇದಕ್ಕೂ ಮುನ್ನ ಬೆಳಗ್ಗೆ6.45 ಕ್ಕೆ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನದ ಆವರಣದಲ್ಲಿ ತಂಗಿದ್ದ ಆನೆಗಳಿಗೆ ಸಾಂಪ್ರದಾಯಕ ಪೂಜೆ ಸಲ್ಲಿಸಲಾಯಿತು. ನಂತರ ಅಂಬಾರಿ ಹೊರುವ ಅಭಿಮನ್ಯು ನೇತೃತ್ವದಲ್ಲಿಎಂಟು ಆನೆಗಳು ಮೆರವಣಿಗೆಯ ಮೂಲಕ ಅರಮನೆಯತ್ತ ಸಾಗಿದವು.


ಗಜಪಡೆ ಸ್ವಾಗತ ಕಾರ್ಯಕ್ರಮದಲ್ಲಿ ಮೇಯರ್ ಸುನಂದಾ ಪಾಲನೇತ್ರ, ಶಾಸಕರಾದ ಎಸ್. ಎ. ರಾಮದಾಸ್, ಎಲ್. ನಾಗೇಂದ್ರ, ಮೂಡಾ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ, ಎಸ್.ಪಿ. ಚೇತನ್, ಡಿಸಿಎಫ್ ಕರಿಕಾಳನ್, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಮತ್ತಿತರ ಪ್ರಮುಖರು ಇದ್ದರು.


ಸ್ವಾಗತ ಕಾರ್ಯಕ್ರಮದ ನಂತರ ವರದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ವಿಧಾನ ಮಂಡಲದ ಅಧಿವೇಶನ ಮುಗಿದ ನಂತರ ಪ್ರಮುಖರೊಂದಿಗೆ ಚರ್ಚಿಸಿ, ದಸರಾ ಉದ್ಘಾಟನೆ ಯಾರಿಂದ ಎಂಬುದನ್ನು ತೀರ್ಮಾನಿಸಲಾಗುವುದು.

ಉದ್ಘಾಟಕರ ಬಗ್ಗೆ ಯಾರು ಬೇಕಾದರೂ ಸಲಹೆ ನೀಡಬಹುದು. ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಂತಿಮವಾಗಿ ಅವರು ಆಯ್ಕೆಮಾಡಿ ಹೆಸರು ಪ್ರಕಟಿಸುವರು ಎಂದರು. ಅಕ್ಟೋಬರ್ 7 ರಂದು ದಸರಾ ಉದ್ಘಾಟನೆ ನಡೆಯಲಿದೆ. ಅ. 15 ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.


ಫುಟ್‌ಪಾತ್ ಏರಿದ್ದ “ಅಶ್ವತ್ಥಾಮ’: ದಸರಾದಲ್ಲಿ ಭಾಗವಹಿಸಲು ಮೊದಲ ಬಾರಿಗೆ ಬಂದಿರುವ ಆನೆ ಅಶ್ವತ್ಥಾಮ ಅರಣ್ಯಭವನದಿಂದ ಮೆರಣಿಗೆಯಲ್ಲಿ ಬರುವ ವೇಳೆ ನಗರದ ಸದ್ದುಗದಲ್ಲಕ್ಕೆ ಬೆದರಿ ಫುಟ್‌ಪಾತ್ ಏರಿದ ಘಟನೆಯೂ ನಡೆಯಿತು. ಇದರಿಂದ ಎಚ್ಚೆತ್ತುಕೊಂಡ ಮಾವುತ, ಕಾವಾಡಿ ಆನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಫುಟ್‌ಪಾತ್‌ನಿಂದ ಕೆಳಗಿಳಿಸಿ ರಸ್ತೆಯಲ್ಲಿ ಸಾಗುವಂತೆ ನೋಡಿಕೊಂಡರು.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024