ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಗೀತಾ ಶಿವರಾಜ್ ಕುಮಾರ್

Team Newsnap
1 Min Read

ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಹೋದರ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಇದ್ದರು.

ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಅವರ ಪುತ್ರಿ ಗೀತಾ ಅವರು 2014 ರಲ್ಲಿ ಜೆಡಿಎಸ್ ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಸಹೋದರ ಮಧುಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಸೊರಬದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಇಂದು ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ : ಇವತ್ತಿನದು ಶುಭದಿನ ,ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ ,ಒಂದು ಗಾಳ ದಲ್ಲಿ ಮಧುಬಂಗಾರಪ್ಪ ಸಿಕ್ಕಿಹಾಕಿಕೊಂಡ್ರು, ಹಾಗೆ ಇನ್ನೊಂದು ಕಡೆ ಗೀತಾ ಶಿವರಾಜ್ ಕುಮಾರ್ ಗೂ ಬಲೆ ಹಾಕಬೇಕಾಗಿತ್ತು.ಅದೂ ಕೂಡ ಈಗ ಸಾಕಾರವಾಯ್ತು.

ನಾಳೆಯಿಂದ ಸೊರಬದಲ್ಲಿ ಗೀತಾ ಶಿವರಾಜ್ ಕುಮಾರ್ , ಸಹೋದರ ಮಧುಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ.

Share This Article
Leave a comment