January 16, 2025

Newsnap Kannada

The World at your finger tips!

rajya pala1

ರಾಜ್ಯದ ನೂತನ ರಾಜ್ಯಪಾಲರಾಗಿ ಗೆಹ್ಲೋಟ್‌ ಪ್ರಮಾಣ ವಚನ ಸ್ವೀಕಾರ

Spread the love

ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ತಾವರ್​ ಚಂದ್ ಗೆಹ್ಲೋಟ್ ಭಾನುವಾರ ಬೆಳಿಗ್ಗೆ 10.30 ಕ್ಕೆ ಪ್ರಮಾಣವಚನ ಸ್ವೀಕರಿಸಿದರು.‌

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾ. ಎ. ಜಿ ಓಕಾ ನೂತನ ರಾಜ್ಯಪಾಲರಿಗೆ ಗೌಪ್ಯತೆ ಯ ಪ್ರಮಾಣವಚನ‌ ಬೋಧಿಸಿದರು.

ಮುಖ್ಯ ಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ವೀಕರ್ ಕಾಗೇರಿ, ವಿಧಾನ‌ ಪರಿಷತ್ ಸಭಾಪತಿ ಹೊರಟ್ಟಿ ಸೇರಿದಂತೆ, ಹಿರಿಯ ಅಧಿಕಾರಿಗಳು, ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಧ್ಯಪ್ರದೇಶದ ಹಿರಿಯ ರಾಜಕಾರಣಿ ಗೆಹ್ಲೋಟ್, ಮೂರು ಬಾರಿ ಶಾಜಾಪುರ ಮೀಸಲು ಕ್ಷೇತ್ರದ ಶಾಸಕರಾಗಿದ್ದರು. ನಾಲ್ಕು ಬಾರಿ ಲೋಕಸಭಾ ಸಂಸದರಾಗಿ ಕಾರ್ಯ ನಿರ್ವಹಿಸಿದ್ದರು. 

ಕೇಂದ್ರದಲ್ಲಿ ಸಾಮಾಜಿಕ ನ್ಯಾಯ & ಸಬಲೀಕರಣ ಸಚಿವರೂ ಆಗಿದ್ದ ಗೆಹ್ಲೋಟ್ ಈಗ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ಸಂಘಟನೆಯಲ್ಲಿ ಮತ್ತು ಸರ್ಕಾರದಲ್ಲಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿರುವ ಗೆಹಲೋತ್​, 2013ರಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿಯೂ ಆಗಿಯೂ ಜವಾಬ್ದಾರಿ ನಿಭಾಯಿಸಿದ್ದಾರೆ. ಗೆಹ್ಲೋಟ್ ರವರಿಗೆ ರಾಜ್ಯದ ರಾಜಕಾರಣಿಗಳು, ಹಾಗೂ ಇಲ್ಲಿನ ವಿದ್ಯಾಮಾನಗಳ ಬಗ್ಗೆ ಚೆನ್ನಾಗಿ ತಿಳಿದಿದೆ.

Copyright © All rights reserved Newsnap | Newsever by AF themes.
error: Content is protected !!