ಮದುವೆಗಳಿಗೆ ಇನ್ನು ಮುಂದೆ ಪಾಸ್ ಕಡ್ಡಾಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್ ಈಗಾಗಲೇ ಬುಕ್ ಆಗಿರುವ ಮದುವೆಗಳಿಗೆ ಪಾಸ್ ಬೇಕಿಲ್ಲ. ಆದರೆ ಇವತ್ತಿನಿಂದ ಬುಕ್ ಆಗುವ ಮದುವೆಗಳಿಗೆ ಪಾಸ್ ಕಡ್ಡಾಯ ಎಂದು ಹೇಳಿದರು.
ಕಲ್ಯಾಣ ಮಂಟಪಗಳಲ್ಲಿ 100 ಮಂದಿಗಷ್ಟೇ ಅವಕಾಶ ನೀಡಲಾಗುತ್ತದೆ. ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಸೇರಿದರೆ ಎಫ್‍ಐಆರ್ ದಾಖಲಿಸಲಾಗುತ್ತದೆ.
ಮದುವೆ ಪಾಸ್ ಗಳನ್ನು ಮದುವೆ ಆಯೋಜಕರೇ ವಿತರಣೆ ಮಾಡಬೇಕು. ಹೆಚ್ಚಿನ ಪಾಸ್ ಕೊಟ್ಟಿದ್ದರೆ ಕಲ್ಯಾಣ ಮಂಟಪ ಮಾಲೀಕರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ. ಅಲ್ಲದೆ ಮದುವೆ ಮಾಡುವ ಕುಟುಂಬಸ್ಥರ ವಿರುದ್ಧ ಎಫ್‍ಐಅರ್ ದಾಖಲು ಮಾಡಲಾಗುವುದು ಎಂದರು.
50 ಪಾಸ್ ಗಳನ್ನು ಅಲ್ಲಿನ ತಹಶೀಲ್ದಾರರು ನೀಡಿ ಮಾಡಿ ಆಯಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
ಮಂಟಪದ ಒಳಗೆ ಆದರೆ 100, ಹೊರಗಡೆ ಆದರೆ 200 ಜನ ಅಷ್ಟೆ ಇರಬೇಕು. ಸರ್ಕಾರ ನಿಗದಿ ಮಾಡಿರುವ ಪಾಸ್ ಅಷ್ಟೆ ಕೊಡೋದು. ಅದಕ್ಕಿಂತ ಹೆಚ್ಚಾದರೆ ನಾವು ಕಲ್ಯಾಣ ಮಂಟಪವನ್ನೇ ಮುಚ್ಚಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ