ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಕಾರಣ ಸುಪ್ರಸಿದ್ದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆಯನ್ನು ರದ್ದುಗೊಳಿಸಲಾಗಿದೆ..
ಜನವರಿ 08 ಕ್ಕೆ ನಡೆಯಬೇಕಿದ್ದ ಬ್ರಹ್ಮರಥೋತ್ಸವವನ್ನು ರದ್ದುಗೊಳಿಸಿ ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.
ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಕೇವಲ ಅರ್ಚಕರು, ದೇವಾಲಯದ ಆಡಳಿತ ಮಂಡಳಿಯಿಂದ ರಥೋತ್ಸವ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು ಸರಳ ರಥೋತ್ಸವಕ್ಕೆ ಸಲಹೆ ನೀಡಿದೆ. ಇನ್ನು ಹೆಚ್ಚಿನ ಜನ ರಥೋತ್ಸವದಲ್ಲಿ ಭಾಗವಹಿಸುವ ಹಿನ್ನೆಲೆ ಕೋವಿಡ್ ಆತಂಕ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು