ರಾಜ್ಯದಲ್ಲಿ ಜಿಪಂ – ತಾಪಂ ಚುನಾವಣೆಗೆ ಮತ್ತೆ ಕಂಟಕ : ಕ್ಷೇತ್ರ ವಿಂಗಡಣೆ – ಮೀಸಲಾತಿ ಮೇಲೆ ಪರಿಣಾಮ ಸಾಧ್ಯತೆ

Team Newsnap
1 Min Read

ರಾಜ್ಯದಲ್ಲಿ ಜಿಪಂ ತಾಪಂ ಚುನಾವಣೆಗೆ ಕಂಟಕ ತಪ್ಪಿದ್ದಲ್ಲ. ಗ್ರಾಮೀಣ ಜನಸಂಖ್ಯೆ ಆಧಾರದ ಮೇಲೆ ಮತ್ತೊಮ್ಮೆ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈಗ ವಿಧಾನಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಲಾಗಿದೆ.

ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು, ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ ತಿದ್ದುಪಡಿಗೆ ಸುಗ್ರೀವಾಜ್ಞೆಯನ್ನು ತರಲಾಗಿತ್ತು. ಈಗ ಸುಗ್ರೀವಾಜ್ಞೆಗೆ ಕಾಯ್ದೆಯ ಸ್ವರೂಪ ನೀಡಲು ಮತ್ತೊಮ್ಮೆ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಮತ್ತೆ ಹೆಚ್ಚಾಗಲಿದೆ. ಇದು ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ. ಸರ್ ಎಂ ವಿಶ್ವೇಶ್ವರಯ್ಯ (Sir M Vishweshwaraiah)

7 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಕನಿಷ್ಠ 20 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ನಿಯಮವನ್ನು 25 ಜಿಲ್ಲಾ ಪಂಚಾಯಿತಿ ಸದಸ್ಯರು ಎಂದು ತಿದ್ದುಪಡಿ ಮಾಡಲಾಗಿದೆ. 7 -9.5 ಲಕ್ಷ ಜನಸಂಖ್ಯೆಗೆ 28 ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು. 2.30 ಲಕ್ಷ ಗ್ರಾಮೀಣ ಜನಸಂಖ್ಯೆಗೆ ಕನಿಷ್ಠ 12 ತಾಲೂಕು ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ಅಂಶ ಸೇರಿಸಲಾಗಿದೆ.

Share This Article
Leave a comment