January 30, 2026

Newsnap Kannada

The World at your finger tips!

priyank karge 1

ಗೋ ನಿಷೇಧ – ಮತಾಂತರ ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ವಾಪಸ್ಸು : ಸಚಿವ ಪ್ರಿಯಾಂಕ್‌ ಖರ್ಗೆ

Spread the love

ಮತಾಂತರ ನಿಷೇಧ, ಗೋ ನಿಷೇಧ, ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಯನ್ನು ವಾಪಸ್ಸು ಪಡೆದುಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ ‘ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆಂದು ಭರವಸೆ ನೀಡಿದ್ದೇವೆ. ಆ ನಿಟ್ಟಿನಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ಸಂವಿಧಾನ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯಲಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

ಕನ್ನಡಿಗರಿಗೆ ತೊಂದರೆಯಾಗುವ ಎಲ್ಲಾ ಆದೇಶಗಳನ್ನು ಮತ್ತು ಪಠ್ಯ ಪುಸ್ತಕ ರಚನೆಗೆ ಸಂಬಂಧಪಟ್ಟಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.

ಪಠ್ಯ ಪರಿಷ್ಕರಣೆ ಕೂಡ ರಾಜ್ಯದಲ್ಲಿ ಸುದ್ದಿ ಮಾಡಿದ್ದು, ರೋಹಿತ್‌ ಚಕ್ರತೀರ್ಥ ವಿರುದ್ದ ಕೂಡ ಆಕ್ರೋಶ ಕೇಳಿ ಬಂದಿದೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಲವು ಮಂದಿ ಒತ್ತಾಯಿಸಿದ್ದಾರೆ.

ಬಿಸಿ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ವೇಳೆಯಲ್ಲಿ ತೆಗೆದುಕೊಂಡಿದ್ದ ನಿರ್ಧಾರಗಳು ಹಲವು ವಿವಾದಗಳಿಗೆ ಕಾರಣವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿ ಬಸವಣ್ಣ, ಕುವೆಂಪು, ಬಿ.ಆರ್. ಅಂಬೇಡ್ಕರ್, ಟಿಪ್ಪು ಸುಲ್ತಾನ್ ಅವರನ್ನು ಅವಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಪರಿಷ್ಕರಣೆ ಮಾಡಲಾಗುವುದು ಎಂದರು.

error: Content is protected !!