ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೊಬ್ಬ ಸಮುದ್ರ ಪಾಲಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ.
ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ.
ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ.
ಮಳೆ ಹೆಚ್ಚಾಗುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಬೃಹತ್ ಗಾತ್ರದ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ. ಇದಾವುದನ್ನೂ ಅರಿಯದ ಪ್ರವಾಸಿಗರು, ಸಮುದ್ರದ ತಟದಲ್ಲಿ ಫೋಟೋಗೆ ಪೋಸ್ ಕೊಡಲು ಮುಂದಾಗುತ್ತಾರೆ. ಅದೇ ರೀತಿ ಪೋಸ್ ಕೊಡಲು ಹೋಗಿ ವ್ಯಕ್ತಿ ಇದೀಗ ಸಮುದ್ರದ ಪಾಲಾಗಿದ್ದಾರೆ.
ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ