ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಪಿಪಿ ಪಕ್ಷದಿಂದ ಅಮಿತ್ ಪಾಲೇಕರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಪ್ರಕಟಿಸಿದೆ.
ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ.
ಈ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಅಮಿತ್ ಪಾಲೇಕರ್ ವೃತ್ತಿಯಲ್ಲಿ ವಕೀಲರಾಗಿದ್ದು, ಭಂಡಾರಿ ಸಮುದಾಯದವರಾಗಿದ್ದಾರೆ. ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಮಿತ್ ಪಾಲೇಕರ್ (46) ಒಬಿಸಿ ಭಂಡಾರಿ ಸಮುದಾಯಕ್ಕೆ ಸೇರಿದವರು. ಗೋವಾದಲ್ಲಿ ಈ ಸಮುದಾಯದವರ ಸಂಖ್ಯೆ ಶೇ.35ರಷ್ಟಿದೆ. ಗೋವಾ ಪಾರಂಪರಿಕ ತಾಣಗಳಲ್ಲಿ ಅಕ್ರಮ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ಕೈಗೊಂಡು ಪಾಲೇಕರ್ ಸುದ್ದಿಯಲ್ಲಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ