ಟಾಲಿವುಡ್ ನಟ ಅಲ್ಲು ಅರ್ಜುನ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು
ಬೆಂಗಳೂರಿಗೆ ಬಂದ ನಂತರ ನಾಗವಾರದಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು, ಬಳಿಕ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಾಂತ್ವನ ಹೇಳಿದ್ದಾರೆ.
ನಂತರ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ತಿಳಿಸಿ, ಪುನೀತ್ ರಾಜ್ ಕುಮಾರ್ ಅವರ ಫ್ಯಾಮಿಲಿಯನ್ನು ಭೇಟಿ ಮಾಡಿದೆ. ಇಲ್ಲಿ ದೊಡ್ಡದಾಗಿ ಹೇಳಲು ಏನು ಇಲ್ಲ. ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿಯಾಗುತ್ತಿದೆ. ಅದೇ ರೀತಿ ಪುನೀತ್ ಹೈದರಾಬಾದ್‍ಗೆ ಭೇಟಿ ಕೊಟ್ಟಾಗ ನಮ್ಮನ್ನು ಭೇಟಿಯಾಗುತ್ತಿದ್ದರು ಎಂದು ತಿಳಿಸಿದರು
ಅಲ ವೈಕುಂಠಪುರಂ ಲೋ ಸಿನಿಮಾದ ಬುಟ್ಟ ಬೊಮ್ಮಾ ಸಾಂಗ್ ನೋಡಿ ಇಷ್ಟಪಟ್ಟು ಕರೆ ಮಾಡಿದ್ದರು.
ಕೋವಿಡ್ ಇದ್ದ ಕಾರಣ ಹಿಂದೆ ಮಾತನಾಡಲು ಬರುವುದಕ್ಕೆ ಆಗಿರಲಿಲ್ಲ. ಹಾಗಾಗಿ ಈಗ ಬಂದಿದ್ದೇನೆ.
ಪುನೀತ್ ಹಾಗೂ ನಾನು ಚೆನ್ನೈನ ಡ್ಯಾನ್ಸ್ ಕಾರ್ಯಕ್ರಮಕ್ಕೆ ಒಟ್ಟಿಗೆ ಹೋಗಿದ್ವಿ ಅದು ನನ್ನ ಜೀವನದ ಮರೆಯಲಾಗದ ಕ್ಷಣ ಎಂದು ನೆನಪಿಸಿಕೊಂಡರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ