ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ IPS ಅಧಿಕಾರಿ ಸಂಬಂಧಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ DRI ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ತಡರಾತ್ರಿ 11 ಗಂಟೆ ಸುಮಾರಿಗೆ ಅಧಿಕಾರಿಗಳು ಸಂಬಂಧಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೇರೆ ದೇಶದಿಂದ ದೆಹಲಿಯ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಎಸ್ಕಾರ್ಟ್‌ಗೆ ಬಂದಿದ್ದ ಪೊಲೀಸರನ್ನೂ ವಶಕ್ಕೆ
ಕಳ್ಳಸಾಗಣೆ ಆರೋಪಿಯ ಎಸ್ಕಾರ್ಟ್‌ಗೆ ಬಂದಿದ್ದ ಕೆಲ ಪೊಲೀಸ್ ಅಧಿಕಾರಿಗಳನ್ನೂ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನು ಓದಿ –ಹಾಸನ, ಕೊಡಗು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಈಶ್ವರ ಖಂಡ್ರೆ
ಅವರು ಸ್ಮಗ್ಲಿಂಗ್‌ಗೆ ಸಹಾಯ ಮಾಡುತ್ತಿದ್ದಾರ ಎಂಬ ಶಂಕೆಯ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಮುಂದಿನ ತನಿಖೆ ತೀವ್ರಗೊಳಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು