March 14, 2026

Newsnap Kannada

The World at your finger tips!

shivashankaran

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಕೇರಳ ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಬಂಧನ

Spread the love

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರನ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಶಂಕರ್ ಅವರನ್ನು ಬಂಧಿಸಿರುವ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ.26ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ 30 ಕೆಜಿ ಚಿನ್ನ ಸಾಗಾಟ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಬೆನ್ನಲ್ಲೇ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಶಿವಶಂಕರ್ ಅವರನ್ನು ವಜಾ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

error: Content is protected !!