March 5, 2026

Newsnap Kannada

The World at your finger tips!

farmer , deposit , PM yojana

ರೈತರಿಗೆ ಸಿಹಿ ಸುದ್ದಿ: ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದರೆ ಬಡ್ಡಿ ಮನ್ನಾ!

Spread the love

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದೊಡ್ಡ ಉಡುಗೊರೆ ಘೋಷಿಸಿದ್ದಾರೆ. ಈ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವ ಅವರು, ರೈತರ ಸಾಲದ ಬಡ್ಡಿ ಮನ್ನಾ ಮಾಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಯಾವ ಬ್ಯಾಂಕ್‌ಗಳಲ್ಲಿ ಬಡ್ಡಿ ಮನ್ನಾ?

ಡಿಸಿಸಿ (DCC) ಮತ್ತು ಪಿಕಾರ್ಡ್ ಬ್ಯಾಂಕ್‌ಗಳಲ್ಲಿ (Picard Bank) ಸಾಲ ಪಡೆದಿರುವ ರೈತರಿಗೆ ಈಗ ಬಡ್ಡಿ ಕಟ್ಟುವ ಅಗತ್ಯವಿಲ್ಲ. ಈ ಎರಡು ಬ್ಯಾಂಕ್‌ಗಳಲ್ಲಿ ರೈತರ ₹240 ಕೋಟಿ ಬಡ್ಡಿ ಸಂಪೂರ್ಣವಾಗಿ ಮನ್ನಾ ಮಾಡಲಾಗಿದೆ.

ರೈತರಿಗೆ ಭಾರೀ ಸಾಲ ಪ್ಯಾಕೇಜ್

ಇದನ್ನು ಓದಿ -ಅಬಕಾರಿ ಇಲಾಖೆಗೆ 40,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ – ಸಿಎಂ ಸಿದ್ದರಾಮಯ್ಯ

37 ಲಕ್ಷಕ್ಕೂ ಅಧಿಕ ರೈತರಿಗೆ ಸಾಲ ನೀಡಲು ₹28,000 ಕೋಟಿ ಅನುದಾನ ಘೋಷಿಸಲಾಗಿದೆ. ಈ ಮೂಲಕ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಲು ಮುಂದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

error: Content is protected !!