ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ ನೀಡಿದೆ. ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಗೊಬ್ಬರ ಬೆಲೆ ಇಳಿಕೆ : ಜಾಗತಿಕವಾಗಿ ರಸಗೊಬ್ಬರ ಬೆಲೆ ಏರಿಕೆಯಾಗುತ್ತಿದ್ದರೂ ಇಂತಹ ಬೆಲೆ ಏರಿಕೆಯಿಂದ ನಮ್ಮ ರೈತರನ್ನು ರಕ್ಷಿಸಿದ್ದೇವೆ. ಬಜೆಟ್‌ನಲ್ಲಿ 1.05 ಲಕ್ಷ ಕೋಟಿ ರೂ. ರಸಗೊಬ್ಬರ ಸಬ್ಸಿಡಿ ಜೊತೆಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂ. ರೈತರಿಗೆ ಅನುಕೂಲವಾಗುವಂತೆ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಪೆಟ್ರೋಲ್ ಸುಂಕ ಇಳಿಕೆ: ಬಡವರು ಮತ್ತು ಸಾಮಾನ್ಯರಿಗೆ ಸಹಾಯ ಮಾಡುವ ಬದ್ಧತೆಯೊಂದಿಗೆ
ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಗೆ 6 ರೂ. ನಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 9.5 ರೂ. ಹಾಗೂ ಡೀಸೆಲ್ ದರ 7 ರೂ. ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಗ್ಯಾಸ್ ಗೆ 200 ರು ಸಹಾಯ ಧನ : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ. ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿ ಕಸ್ಟಮ್ಸ್ ಸುಂಕವನ್ನು ಸಹ ಕಡಿಮೆ ಮಾಡುತ್ತಿದೆ. ಈ ಕಾರಣಕ್ಕಾಗಿ MSME, ರಾಸಾಯನಿಕಗಳು, ಪ್ಲಾಸ್ಟಿಕ್ ಅಂತಿಮ ಉತ್ಪನ್ನಗಳ ವೆಚ್ಚ ಕಡಿಮೆಯಾಗಲಿದೆ.
ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
ತಗ್ಗಲಿರುವ ಕಬ್ಬಿಣದ ಬೆಲೆ : ಕಚ್ಚಾ ವಸ್ತುಗಳು, ಕಬ್ಬಿಣ ಮತ್ತು ಉಕ್ಕಿನ ಬೆಲೆಗಳನ್ನು ಕಡಿಮೆ ಮಾಡಲು ಕಸ್ಟಮ್ಸ್ ಸುಂಕವನ್ನು ಮಾಪನ ಮಾಡಲಾಗುತ್ತಿದೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುವುದು. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುತ್ತದೆ. ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪೆಟ್ರೋಲ್ , ಡಿಸೇಲ್ ದರ ಎಷ್ಟು ?
ಪೆಟ್ರೋಲ್ ಬೆಲೆ – 111.09 ಪೈಸೆ ಹಾಗೂ ಡಿಸೇಲ್ ಬೆಲೆ – 94.79 ಪೈಸೆ ಇದೆ. ಅಬಕಾರಿ ಸುಂಕ ಕಡಿಮೆ ಮಾಡಿದರೆ ಪೆಟ್ರೋಲ್ ಬೆಲೆ – 102.09 ಪೈಸೆ ಹಾಗೂ ಡಿಸೇಲ್ ಬೆಲೆ – 87.79 ಪೈಸೆ ಆಗಬಹುದು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ