ಅಕಾಡೆಮಿಯಲ್ಲಿ ಪೊಲೀಸರಿಗೆ ಉತ್ತಮ ತರಬೇತಿ -ಆರಗ

Team Newsnap
1 Min Read

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಪೊಲೀಸರಿಗೆ ಉತ್ತಮ ತರಬೇತಿ ದೊರೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾನೇನು ಕಾಲಹರಣ ಮಾಡುತ್ತಿಲ್ಲ. ಪೊಲೀಸ್ ಅಕಾಡೆಮಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದೆ. ಸಮಾಜಕ್ಕೆ ಯೋಗ್ಯ ಪೊಲೀಸ್ ಅಧಿಕಾರಿ ಕೊಡಲು ಏನೆಲ್ಲಾ ಮಾಡಲಾಗುತ್ತದೆ ಎಂಬುದನ್ನು ಅರಿತುಕೊಂಡೆ ಎಂದು ಅವರು ವಿವರಿಸಿದರು.


ತಮ್ಮ ವಿದ್ಯಾರ್ಥಿ ಜೀವನದಲ್ಲಿ ಎನ್‌ಸಿಸಿಯಲ್ಲಿ ಭಾಗವಹಿಸಿದ್ದು, ಶೂಟಿಂಗ್‌ನಲ್ಲಿ ಬಹುಮಾನ ಪಡೆದಿದ್ದನ್ನು ಈ ಸಂದರ್ಭದಲ್ಲಿ ನೆನೆಪಿಸಿಕೊಂಡರು. ಸೈನಿಕರ ಕ್ಯಾಂಪ್‌ನಲ್ಲಿ ಪಾಲ್ಗೊಂಡಿದ್ದೆ. ಒಂದು ಗುಂಡು ಮಿಸ್ ಆಗದೆ ಶೂಟ್ ಮಾಡುವುದು ಮುಖ್ಯವಾಗುತ್ತದೆ ಎಂದರು.


ಸ್ಥಳಕ್ಕೆ ಭೇಟಿ: ಗೃಹಸಚಿವರು ಇಂದು ಮಧ್ಯಾಹ್ನ ಸುಮಾರು 2 ರ ವೇಳೆ ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಸಚಿವರು ನಂತರ ಪೊಲೀಸ್ ಅಕಾಡೆಮಿಗೆ ಭೇಟಿ ನೀಡಿದ್ದರು.


ಐಜಿ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಅರಗ ಜ್ಞಾನೇಂದ್ರ ಮಧ್ಯಾಹ್ನದ ವೇಳೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿನ ಲಲಿತಾದ್ರಿಪುರದ ಬಳಿ ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

Share This Article
Leave a comment