January 28, 2026

Newsnap Kannada

The World at your finger tips!

vidansoudha

‘ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಖಡಕ್ ಆದೇಶ-ಬೆಳಿಗ್ಗೆ 10 ಕ್ಕೆ ಕಚೇರಿಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ

Spread the love

ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು ಕೆಲವು ನೌಕರರು, ಅಧಿಕಾರಿಗಳಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯನಿಷ್ಠೆಯ ಕೊರತೆಯನ್ನು ಇತ್ತೀಚಿನ ದಿನಗಳಲ್ಲಿ ಅವಲೋಕಿಸಲಾಗಿದೆ ಎಂದಿದ್ದಾರೆ.

govt 10

ಸಾರ್ವಜನಿಕರು ದೂರದ ಸ್ಥಳಗಳಿಂದ ಸರ್ಕಾರಿ ಕಚೇರಿಯಲ್ಲಿನ ತಮ್ಮ ಕಾರ್ಯಗಳಿಗೆ ಬೆಳಿಗ್ಗೆ ನಿಗದಿತ ಅವಧಿಗೆ ಸರ್ಕಾರದ ಕಚೇರಿಗಳಿಗೆ ಭೇಟಿ ನೀಡಿದಾಗ ಬಹುತೇಕ ಕಚೇರಿಗಳಲ್ಲಿ ಸಿಬ್ಬಂದಿಗಳು, ಅಧಿಕಾರಿಗಳು ಕಚೇರಿಗೆ ಹಾಜರಾಗಿಲ್ಲದೇ ಇರುವ ಕಾರಣ ಸಾಮಾನ್ಯ ಜನರು ಬವಣೆ ಪಡುವಂತೆ ಆಗಿದೆ ಎಂದು ಹೇಳಿದ್ದಾರೆ.

ಜು.30ರಂದು ಸಿಇಟಿ ಫಲಿತಾಂಶ – ಸಚಿವ ಅಶ್ವತ್ಥನಾರಾಯಣ

ಈ ಹಿನ್ನಲೆಯಲ್ಲಿ ಸರ್ಕಾರದ ಕಚೇರಿ ಪ್ರಾರಂಭದ ಸಮಯ ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವುದು. ಅನ್ಯ ಕರ್ತವ್ಯದ ಮೇರೆಗೆ ತೆರಳಬೇಕಾಗಿದ್ದಲ್ಲಿ, ಸಕಾರಣವನ್ನು ನಮೂದಿಸಿ, ಮೇಲಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆಯತಕ್ಕದ್ದು ಎಂದು ತಿಳಿಸಿದ್ದಾರೆ.

error: Content is protected !!