ಮಹಿಳೆಯರಿಗೆ ‘ಸರ್ಕಾರದ ಶಕ್ತಿ’

Team Newsnap
1 Min Read
  • ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಶನಿವಾರ ಪಲ್ಲಕ್ಕಿ ಬಸ್‍ಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಲೆ ಏರಿಕೆ ಸಮಸ್ಯೆಗೆ ಸರ್ಕಾರ ಪರಿಹಾರ ನೀಡಿದೆ. ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದೇವೆ. ನಾವು ಗ್ಯಾರಂಟಿ ಯೋಜನೆ ಘೋಷಿಸಿದಾಗ ಅನೇಕರು ನಮ್ಮನ್ನು ಟೀಕಿಸಿದರು. ಬೇರೆ ರಾಜ್ಯದ ಮುಖ್ಯಮಂತ್ರಿಗಳು, ನಿಮ್ಮಿಂದ ನಾವು ಇಕ್ಕಟ್ಟಿಗೆ ಸಿಲುಕಿದ್ದೇವೆಂದು ಹೇಳಿದ್ದಾರೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಲ್ಲಿ ಈವರೆಗೂ ಸುಮಾರು 70.73 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಈ ಮೊತ್ತ ನೀಡಬೇಕಾಗಿದೆ. ಸರ್ಕಾರದ ಮೇಲೆ ಈ ಹೊರೆ ಇದೆ. ಕಳೆದ ಏಳೆಂಟು ವರ್ಷಗಳಿಂದ ರಾಜ್ಯದ ಬಸ್ ದರದಲ್ಲಿ ಏರಿಕೆ ಮಾಡಿಲ್ಲ. ಸಾರಿಗೆ ಸಂಸ್ಥೆಗಳನ್ನು ವೃತ್ತಿಪರ ವಾಗಿ ಮುನ್ನಡೆಸಲು ಬದ್ಧತೆ ಇಲ್ಲದ ಕಾರಣ ಸಂಸ್ಥೆ ಸೋರಗುವಂತಾಗಿದೆ. ಸರ್ಕಾರಿ ಸಂಸ್ಥೆಯಾಗಿ ಲಾಭ ಮಾಡುವುದರ ಜತೆಗೆ, ಜನರಿಗೂ ಅನುಕೂಲ ಮಾಡಿಕೊಡಬೇಕು.

ಈ ಸಂಸ್ಥೆಯ ಕಾರ್ಮಿಕರ ಹಿತವನ್ನು   ಕಾಯಬೇಕು. ಹೀಗಾಗಿ ಸಂಸ್ಥೆ ಲಾಭ ಕಾಣುವುದು ಮುಖ್ಯ. ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ.ವರೆಗೂ ವಿಮಾ ಪರಿಹಾರ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.KSRTC ಪಲ್ಲಕ್ಕಿ BUS ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರಿಗೆ ಹೋಗುವಾಗ ಈ ಬಸ್‍ನಲ್ಲಿ ಪ್ರಯಾಣ ಮಾಡಿ ನೋಡು ಎಂದು ನನ್ನ ಪತ್ನಿಗೂ ತಿಳಿಸಿದ್ದೇನೆ. ಈ ಹಿಂದೆ ಪಲ್ಲಕ್ಕಿಯನ್ನು ರಾಜ ಮಹಾರಾಜರನ್ನು ಹೊರಲು ಬಳಸಲಾಗುತ್ತಿತ್ತು. ಈಗ ನಮ್ಮ ಮಹಿಳೆಯರು ಹಾಗೂ ಪ್ರಯಾಣಿಕರನ್ನು ಈ ಪಲ್ಲಕ್ಕಿ ಹೊರಲಿದೆ ಎಂದರು.

Share This Article
Leave a comment