ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದ ಅನುಮತಿ: ಐದು ದಿನಗಳ ಗಡುವು

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಬಂಧ ಕೆಲದಿನಗಳಿಂದ ಮೂಡಿದ್ದ ಹಲವು ಅನುಮಾನಗಳಿಗೆ ಇಂದು ತೆರೆಬಿದ್ದಿದೆ. ಐದು ದಿನಗಳ ಕಾಲ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಹಾಗೆಯೇ ಹಲವು ಷರತ್ತುಗಳನ್ನು ವಿಧಿಸಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮಹತ್ವದ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರಿಗೆ ಗಣೇಶೋತ್ಸವ ಆಚರಣೆ ಸಂಬಂಧ ಮಾಹಿತಿ ನೀಡಿದರು.

ಷರತ್ತುಗಳು ಹೀಗಿವೆ:
*ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಅಗತ್ಯ.
*ನಗರ ಪ್ರದೇಶಗಳಲ್ಲಿ ವಾರ್ಡ್ಗೆ ಒಂದು ಗಣೇಶ ವಿಗ್ರಹ ಸ್ಥಾಪನೆ.
*ತಾಲೂಕು, ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತದ ಸೂಚನೆ ಮೇರೆಗೆ ಮೂರ್ತಿ ಸ್ಥಾಪನೆ.
*ಗಣೇಶೋತ್ಸವದ ಸಂಘಟಕರು ಕೋವಿಡ್ ಲಸಿಕೆ ಪಡೆದಿರಬೇಕು.
*ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲೇ ವ್ಯಾಕ್ಸಿನೇಷನ್ ಅಭಿಯಾನ.
*ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು.
50 .50 ವಿಸ್ತೀರ್ಣದ ಪೆಂಡಾಲ್ ನಿರ್ಮಾಣಕ್ಕೆ ಅವಕಾಶ.
*ಯಾವುದೇ ಮನರಂಜನಾ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಡಿಜೆಗಂತೂ ಇಲ್ಲವೇ ಇಲ್ಲ.
*ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಮೆರವಣಿಗೆಯಿಲ್ಲ. ವಾದ್ಯಗಳನ್ನು ಬಳಸುವಂತಿಲ್ಲ.
*ನಿಗದಿತ ಸದಸ್ಯರಿಂದ, ನಿಗದಿತ ಸ್ಥಳಗಳಲ್ಲಿ ಮೂರ್ತಿಯ ವಿಸರ್ಜನೆ.
*ಹಳ್ಳಿಗಳಲ್ಲಿ ಕೆರೆಗಳಲ್ಲಿ ವಿಸರ್ಜನೆಗೆ ಅವಕಾಶ.
*ಕೋವಿಡ್ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುವ ಗಡಿ ಜಿಲ್ಲೆಗಳಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪಿಸಬಹುದು.
*ಶಾಲಾ-ಕಾಲೇಜುಗಳಲ್ಲಿ ಗಣಪತಿ ಕೂರಿಸಲು ಅವಕಾಶವಿಲ್ಲ.
ಒಂದು ತಾಸು ನಡೆದ ಸಭೆಯಲ್ಲಿ ತಜ್ಞರ ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಆನ್‌ಲೈನ್‌ನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಅಧಿಕಾರಿಗಳು ಭಾಗವಹಿಸಿದ್ದರು.

ಕಳೆದ ಬಾರಿ ಕೊರೊನಾ ಉಚ್ಚಾçಯ ಸ್ಥಿತಿಯಲ್ಲಿದ್ದ ಕಾರಣ ಸಾರ್ವಜನಿಕ ಗಣೇಶ ಹಬ್ಬಕ್ಕೆ ಅವಕಾಶವಿರಲಿಲ್ಲ. ಈ ಬಾರಿ ಪರಿಸ್ಥಿತಿ ಸುಧಾರಿಸಿದೆ. ಹಾಗೆಯೇ ಅಕ್ಟೋಬರ್, ನವೆಂಬರ್‌ನಲ್ಲಿ ಮೂರನೇ ಅಲೆ ಬರಬಹುದು ಎಂದು ತಜ್ಞರು ಹೇಳಿರುವುದರಿಂದ ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಿದೆ ಎಂದು ಅಶೋಕ್ ಹೇಳಿದರು.

ಅಪಾರ್ಟ್ಮೆಂಟ್‌ಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡಲಾಗಿದೆ. ಅದರೆ 20 ಕ್ಕಿಂತ ಹೆಚ್ಚು ಜನ ಸೇರಬಾರದು. ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅಪಾರ್ಟ್ಮೆಂಟ್‌ನವರೂ ಹೇಳಿದ್ದಾರೆ. ಬೆಂಗಳೂರಿಗೆ ಸಂಬಂಧಿಸಿದಂತೆ ಸೋಮವಾರ ತಮ್ಮ ನೇತೃತ್ವದಲ್ಲಿ ಸಭೆಯೊಂದು ನಡೆಯಲಿದೆ ಎಂದು ಆಶೋಕ್ ತಿಳಿಸಿದರು.

Share This Article
Leave a comment