Main News

ದಸರಾಗೆ ಸರ್ಕಾರದಿಂದ ಮಾರ್ಗಸೂಚಿ: ಉದ್ಘಾಟನೆಗೆ 200 ಮಂದಿ

ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನು ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ.

ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಅ. 17ರಂದು ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭದಲ್ಲಿ ಗರಿಷ್ಠ 200 ಮಂದಿ ಮಾತ್ರ ಪಾಲ್ಗೊಳ್ಳಬಹುದು ಎಂದು ತಿಳಿಸಲಾಗಿದೆ. ಒಟ್ಟಾರೆ, ಸಾರ್ವಜನಿಕರಿಗೆ ಈ ಬಾರಿ ದಸರಾವನ್ನು ನೇರವಾಗಿ ವೀಕ್ಷಿಸದಂತೆ ನಿರ್ಬಂಧಿಸಲಾಗಿದೆ.

ಕರ್ತವ್ಯನಿರತ ಸಿಬ್ಬಂದಿ, ಕಲಾವಿದರು ಮತ್ತು ಮಾಧ್ಯಮದವರೂ ಒಳಗೊಂಡಂತೆ 200ಕ್ಕೂ ಹೆಚ್ಚು ಜನರು ಉದ್ಘಾಟನಾ ಕಾರ್ಯಕ್ರಮದಲ್ಲಿ ಇರಬಾರದು ಎಂದು ಸೂಚಿಸಲಾಗಿದೆ.

  • ಅ. 17ರಿಂದ ಎಂಟು ದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಇರಬಾರದು.

*ಅಕ್ಟೋಬರ್ 26ರಂದು ನಡೆಯುವ ಜಂಬೂ ಸವಾರಿಯಲ್ಲಿ 300ಕ್ಕಿಂತ ಹೆಚ್ಚು ಮಂದಿಗೆ ಪ್ರವೇಶ ನೀಡುವಂತಿಲ್ಲ.

  • ಅ. 17ರಿಂದ ಹತ್ತು ದಿನಗಳ ಕಾಲ ಸಂಜೆ 7ರಿಂದ 9ರವರೆಗೆ ಆಯ್ದ ಸ್ಥಳಗಳಲ್ಲಿ ದೀಪದ ವ್ಯವಸ್ಥೆ ಮಾಡಬೇಕು.
  • ಈ ಸಂದರ್ಭದಲ್ಲಿ ಅಂಥ ಸ್ಥಳಗಳಲ್ಲಿ ಜನದಟ್ಟಣೆ ಸೇರಿದಂತೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು

*ದಸರಾ ಆಚರಣೆಯಲ್ಲಿ ಭಾಗವಹಿಸುವಕರ್ತವ್ಯನಿರತ ಸಿಬ್ಬಂದಿ, ಮಾಧ್ಯಮ ಮೊದಲಾದ ಪ್ರತಿಯೊಬ್ಬರೂ ಕೂಡ ಅ. 14ರ ನಂತರ ಆರ್​ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗಟಿವ್ ಇರುವ ದಾಖಲಾತಿಯನ್ನು ಕಡ್ಡಾಯವಾಗಿ ತಂದಿರಬೇಕು.
*ದೈಹಿಕ ಅಂತರ, ಮುಖಗವಸು ಇತ್ಯಾದಿ ಕೋವಿಡ್ ನಿರ್ದೇಶನ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕ್ರಮ ಜರುಗಿಸಬೇಕು.

*ಮೈಸೂರಿನ ದಸರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನ ದೃಶ್ಯ ಸಂವಹನ (ವರ್ಚುವಲ್) ಮೂಲಕ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

  • ಸಾರ್ವಜನಿಕರಿಗೆ ಈ ಕಾರ್ಯಕ್ರಮಗಳಲ್ಲಿ ನೇರವಾಗಿ ಪಾಲ್ಗೊಳ್ಳಲು ಅನುಮತಿ ಇಲ್ಲ. ಆನ್​ಲೈನ್ ವ್ಯವಸ್ಥೆಯ ಮೂಲಕ ಅವರು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ.
Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024