- ದೊಡ್ಡಣ್ಣ ಕೈಗಾರಿಕಾ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ದಲ್ಲಿ ಭಾಗಿ
ನಾಡಿನ, ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುವ ಕೈಗಾರಿಕೆಗಳ ಪ್ರದೇಶದ ಅಭಿವೃದ್ಧಿ ಬಗ್ಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡಣ್ಣ ಕೈಗಾರಿಕಾ ಸಂಘದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ಈ ಭಾಗದಲ್ಲಿ ಮೂಲ ಸೌಕರ್ಯ ತೀರಾ ಹಿಂದುಳಿದಿದ್ದು, ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕಿದೆ ಎಂದು ಆಗ್ರಹಿಸಿದರು.
ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ಶೇ. ಅರ್ಧದಷ್ಟು ಕೈಗಾರಿಕೆಗಳು ಅಳಿವು ಉಳಿವಿನ ಹೋರಾಟ ನಡೆಸುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲ ನೆರವು ಘೋಷಣೆ ಮಾಡಿದರೂ, ಅದು ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ನೆರವಾಗಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು.
ಸಂಘ ಸಂಸ್ಥೆಗಳು ಸೇವಾ ಮನೋಭಾವದ ಜೊತೆಗೆ ಬದ್ದತೆಯಿಂದ ಕೆಲಸ ಮಾಡಿದರೆ ಆ ಸಂಸ್ಥೆಗಳ ಪ್ರತಿ ಸದಸ್ಯರ ಏಳ್ಗೆಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಕೈಗಾರಿಕಾ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಪದಾಧಿಕಾರಿಗಳಾದ ಸುಬ್ರಹ್ಮಣ್ಯ, ಕುಮಾರಸ್ವಾಮಿ, ಮಂಜುನಾಥ್, ಟಿ.ಎಸ್. ಶಿವಕುಮಾರ ಸ್ವಾಮಿ ಮತ್ತಿತರರು ಹಾಜರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು