January 10, 2025

Newsnap Kannada

The World at your finger tips!

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರದ ಹಸಿರು ನಿಶಾನೆ

Spread the love

500 ಕೋಟಿ ರು ವೆಚ್ಚದಲ್ಲಿ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಈ ಕುರಿತಂತೆ ಮಾಹಿತಿ ನೀಡಿ,
ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದೆ. ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆಯೇ, ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ. ಖರ್ಚಾಗಲಿದೆ.
2014-15 ಸಾಲಿನ ಆಯವ್ಯಯದಲ್ಲಿನ ಘೋಷಣೆಯಂತೆ ಚಿತ್ರದುರ್ಗದಲ್ಲಿ 150 ಸೀಟುಗಳ ಎಂಬಿಬಿಎಸ್ ಕಾಲೇಜನ್ನು 2015-16ರಲ್ಲೇ ಸ್ಥಾಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿತ್ತು.

ಆದರೆ 2013-14 ರ ಆರ್ಥಿಕ ವರ್ಷದಲ್ಲಿ ಕಲಬುರ್ಗಿ, ಗದಗ, ಕೊಪ್ಪಳ, ಕಾರಾವಾರ, ಕೊಡಗು ಮತ್ತು ಚಾಮರಾಜನಗರದಲ್ಲಿ ಹೊಸ 6 ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಹೊಂದಿಸಿಕೊಳ್ಳಬೇಕಾಗಿದ್ದರಿಂದ ತುಮಕೂರು, ಚಿತ್ರದುರ್ಗ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮುಂದೂಡಲಾಗಿತ್ತು. 2021-22ನೇ ಸಾಲಿನ ಬಜೆಟ್ ನಲ್ಲಿ, ಚಿತ್ರದುರ್ಗ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!