ತಿಂಗಳಿಗೊಮ್ಮೆ ಆಯಾ ಜಿಲ್ಲಾ ಕೇಂದ್ರದಲ್ಲಿ’ ಜನತಾ ದರ್ಶನ’ ನಡೆಸಲು ಸರ್ಕಾರದ ಸೂಚನೆ

Team Newsnap
1 Min Read

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಜನತಾ ದರ್ಶನ ಕಾರ್ಯಕ್ರಮವನ್ನು ಸೆ 25 ರಿಂದ ಪ್ರತಿ ತಿಂಗಳಿಗೊಮ್ಮೆ ಹಾಗೂ ಹದಿನೈದು ದಿನಗಳಿಗೆವೊಮ್ಮೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ನಡೆಸುವಂತೆ ಸರ್ಕಾರ ಸೂಚಿಸಿದೆ.

ಜನತೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗುತ್ತಿದೆ.

ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ವಿವಿದೆಡೆಯಿಂದ ಬೆಂಗಳೂರಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.ಅಹವಾಲುಗಳನ್ನ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸರ್ಕಾರ ನಿರ್ದೇಶನ ನೀಡಿದೆ.

ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲೂ ಆಯಾ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮನ್ವಯ ಸಾಧಿಸಿ ಶಿಷ್ಠಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮ ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜನತಾ ದರ್ಶನ ವೇಳೆ ಎಲ್ಲಾ ವಿಭಾಗಗಳ‌ ಅಧಿಕಾರಿಗಳು ಉಪಸ್ಥಿತರಿದ್ದು ಸ್ವೀಕೃತ ಅರ್ಜಿಗಳನ್ನು ತತ್ರಾಂಶದಲ್ಲಿ ದಾಖಲಿಸುವುದು ಹಾಗೂ ಪರಿಹಾರ ಕಲ್ಪಿಸುವತ್ತ ಗಮನ ಹರಿಸುವಂತೆ ತಿಳಿಸಿದ್ದಾರೆ.ಶ್ರೀ ಗಣೇಶಾಯ ನಮ:

ಅಲ್ಲದೆ ಜಿಲ್ಲಾಧಿಕಾರಿಗಳು 15 ದಿನಗಳಿಗೆ ಒಮ್ಮೆ ತಾಲೂಕುಗಳಲ್ಲಿ ಜನತಾ ದರ್ಶನ ಹಮ್ಮಿಕೊಳ್ಳುತೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ

Share This Article
Leave a comment